ನಾಪತ್ತೆಯಾಗಿದ್ದ ಮಂಗಳೂರಿನ ವಿದ್ಯಾರ್ಥಿ ಕೇರಳದಲ್ಲಿ ಪತ್ತೆ

ಮಂಗಳೂರು : ಮಂಗಳೂರಿನ ಮಾಜಿ ಪೊಲೀಸ್ ಅಧಿಕಾರಿ ಮದನ್ ಅವರೊಂದಿಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ವಿನಾಯಕ್ ಧಿಢೀರ್ ನಾಪತ್ತೆ ಪ್ರಕರಣ ವಿನಾಯಕ್ ಪತ್ತೆಯಾಗುವ ಮೂಲಕ ಸುಖಾಂತ್ಯ ಕಂಡಿದೆ. ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಮಾಜಿ ಪೊಲೀಸ್ ಅಧಿಕಾರಿ ಮದನ್ ಅವರ ಜೊತೆ ಕೆಲಸ ಮಾಡುತ್ತಿದ್ದ ಶಕ್ತಿನಗರದ ವಿನಾಯಕ್‌ ಎಂಬ ಯುವಕ ದಿಢೀರ್ ನಾಪತ್ತೆಯಾಗಿದ್ದು, ಇದೀಗ ಅತನನ್ನು ಕೇರಳದ ಕೊಚ್ಚಿನ್‌ ಪೊಲೀಸರು ಪತ್ತೆ ಮಾಡಿ ಉರ್ವ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Comments

comments